ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಸಾರ್ವಜನಿಕರಿಗಾಗಿ “ಸಸ್ಯಸಂತೆ” ಕಾರ್ಯಕ್ರಮವನ್ನು ಆಗಸ್ಟ್ 14 ರಿಂದ 18 ರ ವರೆಗೆ ಉಡುಪಿಯ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಸ್ಯಸಂತೆಯಲ್ಲಿ ಅಲಂಕಾರಿಕ ಗಿಡಗಳು, ಹಣ್ಣಿನ, ಹೂವಿನ ಗಿಡಗಳು ಖರೀದಿಗೆ ಲಭ್ಯವಿರುತ್ತದೆ ಹಾಗೂ ಸಾವಯವ ಗೊಬ್ಬರ, ಕುಂಡಗಳು ಮತ್ತು ತೋಟಗಾರಿಕೆ ಉಪಕರಣಗಳು ಒಂದೇ ಸೂರಿನಡಿ ಲಭ್ಯವಿರುತ್ತದೆ.
ಕಾರ್ಯಕ್ರಮದಲ್ಲಿ ಮಳಿಗೆಗಳನ್ನು ಹಾಕಲು ಇಚ್ಛಿಸುವ ನರ್ಸರಿ ಮಾಲಿಕರು ಹಾಗೂ ಸ್ವಸಹಾಯ ಸಂಘಗಳು ಆಗಸ್ಟ್ 10 ರ ಒಳಗಾಗಿ ತೋಟಗಾರಿಕೆ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಜೇಷ್ಠತೆ ಆಧಾರದ ಮೇಲೆ ಮಳಿಗೆಗಳನ್ನು ಹಂಚಿಕೆ ಮಾಡಲಾಗುವುದು ಹಾಗೂ ಗರಿಷ್ಟ 20 ಮಳಿಗೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9741255168 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.















