ಆ.4ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಆ. 4ರ ಮಂಗಳವಾರ ರಜೆ ಘೋಷಿಸಿ ಎಂದು ದ.ಕ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ‌.

ಉಳಿದಂತೆ ಎಲ್ಲಾ ಪದವಿ ಪೂರ್ವ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೊತ್ತರ ಪದವಿ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.