ಉಡುಪಿ; ಡೇವಿಡ್‌ ಡಿಸೋಜ ಕೊಲೆ ಆರೋಪಿಯ ಬಂಧನ; ಪೋಲಿಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ರಾಜು ಕಾಲಿಗೆ ಗುಂಡು

ಉಡುಪಿ: ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್ ಡಿಸೋಜ ನನ್ನು ಕೊಲೆಗೈದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಕಾಪು ಪಿಎಸ್‌ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್‌ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಪೋಲಿಸರಿಗೆ ಹಲ್ಲೆ ನಡೆಸಿ ಅರೋಪಿ ರಾಜು ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಪು ಪಿಎಸ್‌ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಈ ವೇಳೆ ಎಸ್ ಐ ತೇಜಸ್ವಿ ಅವರಿಗೆ ಗಾಯವಾಗಿದ್ದು ಉಡುಪಿ ಖಾಸಗಿ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಗೆ ಉಡುಪಿ ಎಸ್ ಹರಿರಾಮ್ ಶಂಕರ್ ಭೇಟಿ ನೀಡಿದ್ದಾರೆ.