ನಿಲ್ಲದ ಮಳೆಯಬ್ಬರ – ದಕ್ಷಿಣ ಕನ್ನಡದ 4 ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ನಿರಂತರವಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಂದು (ಆ.8) ಜಿಲ್ಲೆಯ 4 ನಾಲ್ಕು ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆ ಮುಂದುವರಿದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಂದು (ಆ.8) ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕಿನ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಐಟಿಐ ಹಾಗೂ ಡಿಫ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.