2026ರ ಆ.10: ಸಂಪುಟಕ್ಕೆ ಸರ್ಜರಿ, ಬಿಡದಿ ಹೋರಾಟ ಸೇರಿ ದಿನದ ಪ್ರಮುಖ ಸುದ್ದಿಗಳು

ರಾಜ್ಯ, ರಾಷ್ಟ್ರೀಯ, ವಿದೇಶ, ಸಂಪಾದಕೀಯ, ಆಲ-ಅಗಲ ಹಾಗೂ ಕ್ರೀಡೆಗೆ ಸಂಬಂಧಿಸಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಸಚಿವ ಸಂಪುಟದಲ್ಲಿ ಕೆಲವು ಬದಲಾವಣೆ ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭಾನುವಾರ ರಾತ್ರಿ ನವದೆಹಲಿಯಲ್ಲಿ ಭೇಟಿ ಮಾಡಿ ಸಮಾಲೋಚಿಸಿದರು.

ಜಾರ್ಖಂಡ್ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಜೆಎಸ್‌ಎಸ್‌ಸಿ) ನಡೆಸಿದ ಕಂಬೈನ್ಸ್ ಗ್ರಾಜುಯೇಟ್ ಲೆವೆಲ್ (ಸಿಜಿಎಲ್) ಪರೀಕ್ಷಾ ಅಕ್ರಮಗಳ ಕುರಿತು ಸಿಬಿಐ ತನಿಖೆಯ ಬೇಡಿಕೆ ಹೊರತುಪಡಿಸಿ ವಿದ್ಯಾರ್ಥಿಗಳ ಶೇ 98ರಷ್ಟು ಬೇಡಿಕೆಗಳನ್ನು ಒಪ್ಪಿಕೊಂಡಿರುವುದಾಗಿ ಜಾರ್ಖಂಡ್ ಸರ್ಕಾರ ತಿಳಿಸಿದೆ. ಆದರೆ ಸಿಬಿಐ ತನಿಖೆಗೆ ಪಟ್ಟು ಹಿಡಿದಿರುವ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

‘ವಿಧಾನ ಪರಿಷತ್ತಿನ ನೂತನ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ತಿಳಿಸಿದ್ದಾರೆ.

ರಾಜ್ಯದ ಹಲವು ಪಂಚತಾರಾ ಹೋಟೆಲ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ಮಾಡಿದಾಗ ಅವಧಿ ಮೀರಿದ ಆಹಾರ ಹಾಗೂ ಕೊಳೆತ ತರಕಾರಿ ಪತ್ತೆಯಾಗಿವೆ. ಕರ್ನಾಟಕ ಅಷ್ಟೇ ಅಲ್ಲದೇ ಮಹಾರಾಷ್ಟ್ರ, ತೆಲಂಗಾಣ, ದೆಹಲಿ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿಯೂ ಇಂಥದೇ ಸ್ಥಿತಿ ಇದೆ. ಹೋಟೆಲ್‌ಗಳಲ್ಲಿ ಸಿಗುವ ಆಹಾರ ಪದಾರ್ಥಗಳು, ಅಂಗಡಿಗಳಲ್ಲಿ ಸಿಗುವ ತಿಂಡಿ ತಿನಿಸುಗಳ ಗುಣಮಟ್ಟವನ್ನು ಖಾತರಿಪಡಿಸುವ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದೂ ಇದಕ್ಕೆ ಕಾರಣವಾಗಿದೆ. ಜನರಲ್ಲಿ ಬೊಜ್ಜು, ಮಧುಮೇಹದಂಥ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಅಸುರಕ್ಷಿತ ಆಹಾರವು ಸಾರ್ವಜನಿಕ ಆರೋಗ್ಯದ ಗಂಭೀರ ಸಮಸ್ಯೆಯೂ ಆಗಿದೆ.