ಹೆಬ್ರಿ: ಕಳೆದ ಹಲವಾರು ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಉಚಿತ ಚಿತ್ರಕಲಾ ತರಬೇತಿ ನೀಡಿ ಗ್ರಾಮೀಣ ಮಕ್ಕಳ ಪ್ರತಿಭಾ ಅನಾವರಣಕ್ಕೆ ಅವಕಾಶ ಕಲ್ಪಿಸುತ್ತಿರುವ ಚಾಣಕ್ಯ ಚಿತ್ರಕಲಾ ತರಬೇತಿ ಕೇಂದ್ರ ಹೆಬ್ರಿ ಇದರ ನೇತೃತ್ವದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ಜೆಸಿಐ ಹೆಬ್ರಿ ಇವರ ಸಹಯೋಗದೊಂದಿಗೆ 10ನೇ ವರ್ಷದ ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಚಿಣ್ಣರ ಚಿತ್ತಾರ-2026 ಆ.15ರಂದು ಮಧ್ಯಾಹ್ನ 2 ಗಂಟೆಗೆ ಹೆಬ್ರಿ ಶ್ರೀಮತಿ ಶೀಲಾ ಸುಭೋದ್ ಬಲ್ಲಾಳ್ ಬಂಟರ ಭವನದಲ್ಲಿ ನಡೆಯಲಿದೆ.
ಸ್ಪರ್ಧೆಯು ಸಬ್ ಜ್ಯೂನಿಯರ್, ಜ್ಯೂನೀಯರ್ ಹಾಗೂ ಸೀನಿಯರ್ ವಿಭಾಗದಲ್ಲಿ ನಡೆಯಲಿದ್ದು ವಿಜೇತರಿಗೆ ಪ್ರಥಮ ದ್ವಿತೀಯ ತೃತೀಯ ಬಹುಮಾನ ಜೊತೆ ಪ್ರಮಾಣ ಪತ್ರ ಹಾಗೂ ಎಲ್ಲಾ ವಿಭಾಗದಲ್ಲೂ 10 ಜನರಿಗೆ ಮೆಚ್ಚುಗೆ ಪ್ರಮಾಣ ಪತ್ರ ನೀಡಲಾಗುವುದು.
ಸೀಸನ್ 1 ರಿಂದ 9 ರ ತನಕ ನಡೆದ ಸ್ಪರ್ಧೆಯಲ್ಲಿ ಪ್ರಥಮ ದ್ವಿತೀಯ ಬಂದವರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಹೆಬ್ರಿ ತಾಲೂಕು ವ್ಯಾಪ್ತಿಯವರು ಹಾಗೂ ಹೆಬ್ರಿ ತಾಲೂಕಿನ ಶಾಲಾಗಳಲ್ಲಿ ಕಲಿಯುವ ವಿದ್ಯಾರ್ಥಿಗಳು ತಮ್ಮ ಹೆಸರು, ಊರು ಕಲಿಯುತ್ತಿರುವ ಶಾಲೆ ಮತ್ತು ತರಗತಿಯ ವಿವರವನ್ನು 9900408545 ನಂಬರ್‌ಗೆ ವಾಟ್ಸಪ್ ಮೂಲಕ ಕಳುಹಿಸಿ ನೊಂದಾಯಿಸಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ ಹೆಬ್ರಿ ಎಸ್ಆರ್ ಬಳಿ ಇರುವ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.















