ಮಣಿಪಾಲ: ಮಣಿಪಾಲದ ಮುನಿಯಾಲ್ ಆಯುರ್ವೇದ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ ಕಾಯಚಿಕಿತ್ಸಾ ವಿಭಾಗದ ವತಿಯಿಂದ ಫ್ರೋಜನ್ ಶೋಲ್ಡರ್ (ಭುಜದ ಬಿಗಿತ) ಹಾಗೂ ಇತರೆ ಭುಜ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಆಗಸ್ಟ್ 17ರಿಂದ 22ರವರೆಗೆ ಉಚಿತ ಆಯುರ್ವೇದ ತಪಾಸಣೆ, ವೈದ್ಯಕೀಯ ಸಲಹೆಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.
ಭುಜ ನೋವು, ಭುಜದ ಬಿಗಿತ, ಭುಜದ ಮೃದು ಭಾಗದಲ್ಲಿ ನೋವು, ಕೈ ಎತ್ತಲು ಅಥವಾ ಚಲಿಸಲು ತೊಂದರೆ ಸೇರಿದಂತೆ ವಿವಿಧ ಭುಜ ಸಂಬಂಧಿತ ಸಮಸ್ಯೆಗಳಿರುವವರಿಗೆ ಶಿಬಿರದಲ್ಲಿ ತಜ್ಞ ಆಯುರ್ವೇದ ವೈದ್ಯರಿಂದ ಉಚಿತ ಔಷಧಿ, ತಪಾಸಣೆ ಹಾಗೂ, ವೈದ್ಯಕೀಯ ಸಲಹೆ ಹಾಗೂ ಚಿಕಿತ್ಸೆಯ ಮಾರ್ಗದರ್ಶನ ನೀಡಲಾಗುತ್ತದೆ.
ಅಗತ್ಯವಿರುವ ರೋಗಿಗಳಿಗೆ ಪಂಚಕರ್ಮ ಚಿಕಿತ್ಸೆಯನ್ನು ವಿಶೇಷ ರಿಯಾಯಿತಿ ದರದಲ್ಲಿ ಒದಗಿಸಲಾಗುವುದು ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಬಿರವು ಆಗಸ್ಟ್ 17ರಿಂದ 22ರವರೆಗೆ ಪ್ರತಿದಿನ ಬೆಳಿಗ್ಗೆ 9.00ರಿಂದ ಸಂಜೆ 4.30ರವರೆಗೆ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಮುನಿಯಾಲ್ ಆಯುರ್ವೇದ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ, ಮಣಿಪಾಲದಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗೆ 8123403233 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.















