ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ಕಾರ್ಯಕ್ರಮ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿಗೆ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ಕಾರ್ಯಕ್ರಮದಡಿ ಚರ್ಚ್ ದುರಸ್ತಿ/ನವೀಕರಣ, ಪುನರ್ ನಿರ್ಮಾಣ, ಪುನಃಸ್ಥಾಪನೆ, ಉನ್ನತೀಕರಣ ಹಾಗೂ ಚರ್ಚ್ ಆವರಣ ಗೋಡೆ ನಿರ್ಮಾಣ, ಸಮಾಧಿ/ಸ್ಮಶಾನ ಸ್ಥಳಗಳಲ್ಲಿ ಕಾಂಪೌಂಡ್ ಗೋಡೆ ಮತ್ತು ಮೂಲಭೂತ ಸೌಲಭ್ಯಗಳ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ಕ್ರಿಶ್ಚಿಯನ್ ಸಮುದಾಯದ ಅನಾಥಾಶ್ರಮಗಳು ಮತ್ತು ವೃದ್ಧಾಶ್ರಮಗಳಿಗೆ ಸಹಾಯಧನ ಮತ್ತು ಎಚ್.ಐ.ವಿ/ಏಡ್ಸ್ ಪೀಡಿತರು ಹಾಗೂ ದೈಹಿಕ/ಮಾನಸಿಕ ವಿಕಲಚೇತನರಿಗಾಗಿ ಕ್ರಿಶ್ಚಿಯನ್ ಸ್ವಯಂಸೇವಾ ಸಂಸ್ಥೆಗಳು ನಡೆಸುವ ಆಶ್ರಯ/ಆರೈಕೆ ಕೇಂದ್ರಗಳಿಗೆ ಸಹಾಯಧನ ನೀಡುವ ಕಾರ್ಯಕ್ರಮದಡಿ https://www.kccdclonline.karnataka.gov.inಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸ್ತಾವನೆಯನ್ನು ಮೂಲ ದಾಖಲೆ ಹಾಗೂ ಹೆಚ್ಚುವರಿ ಒಂದು ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೌಲಾನಾ ಆಜಾದ್ ಭವನ ಅಲೆವೂರು ರಸ್ತೆ ಮಣಿಪಾಲ ಇಲ್ಲಿಗೆ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.