ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬoಧಿಸಿದoತೆ ಅಡಿಕೆ ಬೆಳೆಯಲ್ಲಿ ಕಂಡುಬರುತ್ತಿರುವ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕಾಗಿ ತೋಟಗಾರಿಕಾ ಇಲಾಖೆ ವತಿಯಿಂದ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳುವ ಸಲುವಾಗಿ ಮೈಲು ತುತ್ತು ಖರೀದಿಗೆ ಪ್ರತಿ ಹೆಕ್ಟೇರ್ಗೆ ರೂ.1500 ಸಹಾಯಧನ ಗರಿಷ್ಠ 2 ಹೆಕ್ಟೇರ್ ಗಳಿಗೆ ರೂ 3000/-ಗಳ ಸಹಾಯಧನ ಸವಲತ್ತು ವಿತರಿಸಲು ಅವಕಾಶವಿದ್ದು, ಆಸಕ್ತ ರೈತರುಗಳು ತಾವು ಖರೀದಿಸಿರುವ ಮೈಲುತುತ್ತ ಜಿ.ಎಸ್.ಟಿ ಬಿಲ್ಲು, ಆರ್.ಟಿ.ಸಿ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಅಕೌಂಟ್ ಪಾಸ್ ಬುಕ್ ಛಾಯಾ ಪ್ರತಿಗಳೊಂದಿಗೆ ಉಡುಪಿ ತಾಲೂಕಿನ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ.
ಇಲಾಖಾ ಮಾರ್ಗಸೂಚಿಯ ಅನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ, ದೊಡ್ಡಣಗುಡ್ಡೆ, ಉಡುಪಿ ಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.















