ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಕೆ. ಕೊರಗ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣು
ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ 570 ಕೋಟಿ ರೂ. ವ್ಯವಹಾರ ನಡೆಸಿ ರೂ. 1.15 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸತತ ‘ಎ’ ವರ್ಗದ ಅಡಿಟ್ ವರ್ಗೀಕರಣ ಹೊಂದಿದ್ದು ಸಮಾಜಿಕ ಸ್ಪಂದನೆಯೊಂದಿಗೆ, ಗ್ರಾಹಕಸ್ನೇಹಿ ಸಂಘವಾಗಿ ಕಾರ್ಯನಿರ್ವಹಿಸಿದ್ದು ಈ ವಿಶಿಷ್ಟ ಸಾಧನೆಯನ್ನು ಪರಿಗಣಿಸಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರಿನ ಉತ್ಕೃಷ್ಟ ಸಹಕಾರಿ ಸೌಧದ ಸಭಾಂಗಣದಲ್ಲಿ ಜರುಗಿದ ಮಹಾಸಭೆಯಲ್ಲಿ ಜಿಲ್ಲಾ ಬ್ಯಾಂಕ್‌ನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್‌ರವರು “ಸಾಧನಾ ಪ್ರಶಸ್ತಿ”ಯನ್ನು ಸಂಘದ ಅಧ್ಯಕ್ಷರಾದ ಕೆ. ಕೊರಗ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕೆಮ್ಮುರವರಿಗೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಜಯರಾಮ ಪೂಜಾರಿ, ನಿರ್ದೇಶಕರಾದ ಪಿ. ಕೃಷ್ಣ ಪೂಜಾರಿ, ಮಂಜುನಾಥ ಪೂಜಾರಿ, ಕೃಷ್ಣ ಪೂಜಾರಿ ಪಾರಂಪಳ್ಳಿ ಉಪಸ್ಥಿತರಿದ್ದರು.















