ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 6ನೇ ಬಾರಿ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನಿಂದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪಶಸ್ತಿ

ಉಡುಪಿ: ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘ ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಪ್ರಗತಿ ಸಾಧನೆಗಳನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ 2024-25ನೇ ಸಾಲಿನ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆ ಮಾಡಿದೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ.ಎಂ.ಎನ್. ರಾಜೇಂದ್ರ ಕುಮಾರ್ ರವರು ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೀಡಿದ ಪ್ರಶಸ್ತಿಯನ್ನು ನೀಡಿ ಸಂಘದ ಅಧ್ಯಕ್ಷರಾದ ಕೆ.ನಾರಾಯಣ ಬಲ್ಲಾಳ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಧಾಕರ ಜತ್ತನ್ ಇವರನ್ನು ಗೌರವಿಸಿದರು. ಸಂಘವು ಸತತ 13 ವರ್ಷಗಳಿಂದ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಬೆಳಸು ದೇವಿಪ್ರಸಾದ್‌ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್ ಪಾಂಗಳ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಮತಿ ಲಾವಣ್ಯ ಕೆ.ಆರ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರು, ಅಧಿಕಾರಿ ವರ್ಗದವರು ಉಡುಪಿ ವಲಯದ ಬ್ಯಾಂಕ್‌ ಸುಪರ್‌ವೈಸರ್ ಕೆ.ರಾಜರಾಮ ಶೆಟ್ಟಿ, ಬಾಲಗೋಪಾಲ ಬಲ್ಲಾಳ್ ಇವರು ಉಪಸ್ಥಿತರಿದ್ದರು.