ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಯ 5 ಬಿ.ಆರ್.ಸಿ ಕೇಂದ್ರಗಳಲ್ಲಿ ತಲಾ ಒಬ್ಬರಂತೆ ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿಯನ್ನು ಸಮಾಲೋಚಕ ಆಧಾರದ ಮೇಲೆ ನೇಮಕ ಮಾಡಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (ಅವಶ್ಯವಿರುವ ಸಂದರ್ಭ ಪ್ರಾಥಮಿಕ ಶಾಲಾ ಮಕ್ಕಳಿಗೂ ಸಹ) ಸೇವೆಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

28 ರಿಂದ 40 ವರ್ಷದೊಳಗಿನ, ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸೆಲಿಂಗ್ ಮನೋವಿಜ್ಞಾನ ಅಥವಾ ಸಂಬoಧಿತ ವಿಷಯಗಳಲ್ಲಿ ಎಂಎ/ಎoಎಸ್‌ಸಿ ಪದವಿ ಪಡೆದಿರುವ, ಶಾಲೆ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹಾಗೂ ಕನ್ನಡ, ಇಂಗ್ಲಿಷ್ ಮತ್ತು ಮೂಲಭೂತ ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 2 ಕೊನೆಯ ದಿನವಾಗಿದ್ದು, ಪ್ರತಿ ಸಮಾಲೋಚಕರಿಗೆ ಮಾಸಿಕ 40,000 ಗೌರವ ಧನ ಹಾಗೂ 10,000 ಪ್ರಯಾಣ ಭತ್ಯೆಯನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ ದೂ.ಸಂ: 0820-2575383 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.