ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಅಧಿನಿಯಮದಡಿಯಲ್ಲಿ ದಾಖಲಾದ ಪ್ರಮುಖ ಪ್ರಕರಣಗಳಿಗೆ (ಕೊಲೆ, ಅತ್ಯಾಚಾರ, ಪೋಕ್ಸೋ, ಕೊಲೆ ಪ್ರಯತ್ನ, ತೀವ್ರ ಗಾಯ ಹಾಗೂ 7 ವರ್ಷಗಳಿಗೂ ಮೇಲ್ಪಟ್ಟು ಶಿಕ್ಷೆ ಇರುವ ಪ್ರಕರಣಗಳು) ಸಂಬoಧಿಸಿದoತೆ ಪ.ಜಾತಿ/ ಪ.ಪಂಗಡಗಳ (ದೌರ್ಜನ್ಯ ತಡೆ) ನಿಯಮಗಳು – 1995 ರಲ್ಲಿನ ನಿಯಮ-4ರ ಅನ್ವಯ ಘನ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಲು ನುರಿತ ಹಾಗೂ ಅನುಭವಿ ನ್ಯಾಯವಾದಿಗಳನ್ನು ವಿಶೇಷ ಸಾರ್ವಜನಿಕ ಅಭಿಯೋಜಕರನ್ನಾಗಿ ನಿಯಮಾನುಸಾರ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಅರ್ಜಿ ಹಾಗೂ ಇತರೆ ವಿವರಗಳನ್ನೊಳಗೊಂಡ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 7 ರ ಒಳಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, 2 ನೇ ಮಹಡಿ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ ಉಡುಪಿ ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.















