ಕುಂದಾಪುರ: ಯುವತಿ ನಾಪತ್ತೆ

ಉಡುಪಿ ಸೆಪ್ಟಂಬರ್ 01: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಈಶ್ವರಿ (18) ಎಂಬ ಯುವತಿಯು ಮಂಗಳೂರಿನ ಕೂಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಈ ವಿಷಯ ತಿಳಿದ ಆಕೆಯ ಪೋಷಕರು ಕೂಳೂರಿನಿಂದ ಕುಕ್ಕಿಕಟ್ಟೆಗೆ ಕರೆದುಕೊಂಡು ಬಂದಿರುತ್ತಾರೆ.
ಯುವತಿಯು ಹೆಚ್ಚಾಗಿ ಮೊಬೈಲ್ ಫೋನ್ ಬಳಕೆಮಾಡುತ್ತಿದ್ದರಿಂದ ಊರಿನಲ್ಲಿ ಬಿಟ್ಟರೆ ಸರಿಯಾಗಬಹುದೆಂದು ತಿಳಿದು ಪೋಷಕರು ಆಕೆಯೊಂದಿಗೆ ಆಗಸ್ಟ್ 25 ರಂದು ಕುಕ್ಕಿಕಟ್ಟೆಯಿಂದ ಹೊರಟು ಕುಂದಾಪುರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ರಾತ್ರಿ 10.30 ರ ಸುಮಾರಿಗೆ ಬಂದಿದ್ದು, ಯುವತಿಯು ವಾಶ್ ರೂಂ ಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಯುವತಿಯು 4 ಅಡಿ 5 ಇಂಚು ಎತ್ತರ ಇದ್ದು, ಕನ್ನಡ, ತುಳು, ಹಿಂದಿ, ಇಂಗ್ಲೀಷ್ ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಕುಂದಾಪುರ ವಿಭಾಗ ಡಿ.ವೈ.ಎಸ್.ಪಿ ಮೊ.ನಂ: 9480805422, ಕುಂದಾಪುರ ಠಾಣೆಯ ಪಿ.ಐ ಮೊ.ನಂ: 9480805455, ಪಿ.ಎಸ್.ಐ ಮೊ.ನಂ: 8277988957 ಹಾಗೂ 8277988959 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.