ಉಡುಪಿ: ಪೇಜಾವರ ಶ್ರೀಗಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ, ಸುಳ್ಳು ಸುದ್ದಿಗಳನ್ನು ಪಸರಿಸಬಾರದು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ನಿಶಾ ಜೇಮ್ಸ್ ಎಚ್ಚರಿಕೆ ನೀಡಿದ್ದಾರೆ.
ಪೇಜಾವರ ಶ್ರೀಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ, ಸುಳ್ಳು ಸುದ್ದಿಗಳನ್ನು ಹರಿಯಬಿಡಲಾಗುತ್ತಿದೆ. ಹಾಗಾಗಿ ಸಾರ್ವಜನಿಕರು ಕೆಎಂಸಿಯ ವೈದ್ಯರು ನೀಡುವ ಮಾಹಿತಿಯನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಬೇಕು. ಕಿಡಿಗೇಡಿಗಳು ಪಸರಿಸುವ ವದಂತಿ, ಗಾಳಿ ಸುದ್ದಿಗಳಿಗೆ ಕಿವಿಗೊಡಬಾರದು. ಪರಿಗಣಿಸಬೇಕು ಎಂದು ವಿನಂತಿಸಿದ್ದಾರೆ.












