ಉಡುಪಿ ಸೆಪ್ಟಂಬರ್ 04: ಹೆಬ್ರಿ ತಾಲೂಕು ಶೇಡಿಮನೆ ಗ್ರಾಮ ಅಗಳಿಬೈಲು ನಿವಾಸಿ ಸುರತ್ ಕುಮಾರ್ ಶೆಟ್ಟಿ (64) ಎಂಬ ವ್ಯಕ್ತಿಯು ನಿವೃತ್ತ ಪೋಸ್ಟ್ ಮಾಸ್ಟರ್ ಆಗಿದ್ದು, ಎಂದಿನAತೆ ಆಗಸ್ಟ್ 29 ರಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ವಾಕಿಂಗ್ಗೆ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಗೋಧಿ ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಮಾಸೆಬೈಲು ಪೊಲಿಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.















