ಅಕ್ಕ ರಜತ ಮಹೋತ್ಸವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಿದ ಶಾಸಕ ಮಂಜುನಾಥ ಭಂಡಾರಿ

ಫಿಲಡೆಲ್ಫಿಯಾ: ಅಮೆರಿಕದ ಫಿಲಡೆಲ್ಫಿಯಾದಲ್ಲಿ ಸೆಪ್ಟೆಂಬರ್ 4ರಿಂದ 6ರವರೆಗೆ ನಡೆಯುತ್ತಿರುವ ಅಕ್ಕ ರಜತ ಮಹೋತ್ಸವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮತ್ತು ಬಿಜಿಎಸ್ ಸಂಸ್ಥೆಗಳ ಪೀಠಾಧಿಪತಿಗಳಾದ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರೊಂದಿಗೆ ಮಾನ್ಯ ಶಾಸಕರಾದ ಮಂಜುನಾಥ ಭಂಡಾರಿ ಅವರು ಭಾಗವಹಿಸಿದರು.

ವಿದೇಶದಲ್ಲಿ ನೆಲೆಸಿರುವ ಕನ್ನಡಿಗರನ್ನು ಒಗ್ಗೂಡಿಸುವ ಹಾಗೂ ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ವಿಶ್ವಮಟ್ಟದಲ್ಲಿ ಪರಿಚಯಿಸುವ ಉದ್ದೇಶದ ಈ ಸಮ್ಮೇಳನದಲ್ಲಿ ಹಲವು ಗಣ್ಯರು ಭಾಗವಹಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರಾದ ಬಸವನಗೌಡ ಬಾದರ್ಲಿ, ಟಿ.ಎ. ಶರವಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.