ಪ್ರಾಥಮಿಕ ತನಿಖೆಯಲ್ಲಿ ಅದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸಾಹಿಲ್ ನನ್ನು ಕೊಂದಿರಬಹುದು ಎಂದು ತಿಳಿದುಬಂದಿದೆ. ಆದರೆ, ಕೊಲೆಯ ಹಿಂದಿನ ನಿಖರವಾದ ಉದ್ದೇಶ ಇನ್ನೂ ತಿಳಿದುಬಂದಿಲ್ಲ.
ನವದೆಹಲಿ: ಕಾರ್ಖಾನೆಯಲ್ಲಿ ಯುವಕನೊಬ್ಬನನ್ನು ಸಹ ಕೆಲಸಗಾರನೊಬ್ಬ ಇರಿದು ಕೊಂದಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಈಶಾನ್ಯ ದೆಹಲಿಯ ಜಾಫ್ರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಚೌಹಾಣ್ ಬಂಗಾರ್ ಪ್ರದೇಶದ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಯುವಕನೊಬ್ಬನನ್ನು ಸಹ ಕೆಲಸಗಾರನೊಬ್ಬ ಇರಿದು ಕೊಂದಿದ್ದಾನೆ. ಸೆಪ್ಟೆಂಬರ್ 6 ರ ರಾತ್ರಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು 19 ವರ್ಷದ ಸಾಹಿಲ್ ಎಂದು ಪೊಲೀಸರು ಗುರುತಿಸಿದ್ದಾರೆ.
ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ಗುರುತಿಸಿ ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಪೊಲೀಸರ ಪ್ರಕಾರ, ಚೌಹಾಣ್ ಬಂಗಾರ್ನಲ್ಲಿರುವ ಮನೆಯೊಂದರ ನಾಲ್ಕನೇ ಮಹಡಿಯಲ್ಲಿ ಕಾರ್ಖಾನೆಯೊಂದು ಕಾರ್ಯನಿರ್ವಹಿಸುತ್ತಿದೆ. ಕಾರ್ಖಾನೆಯಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಯುವಕನೊಬ್ಬ ಬಿದ್ದಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತು.















