ಒಂದು ರೀಲ್ಸ್ ಕಾರಣಕ್ಕೆ ಎರಡು ಜೀವ ಬಲಿ, ರೀಲ್ಸ್‌ ನೋಡುತ್ತಿದ್ದ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ:

ಬೆಂಗಳೂರು: ರೀಲ್ಸ್‌ ನೋಡುತ್ತಿದ್ದ ವಿಚಾರಕ್ಕೆ ದಂಪತಿ ನಡುವೆ ಗಲಾಟೆ ನಡೆದು, ಪತ್ನಿಯನ್ನು ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೆಚ್‌ಎಎಲ್‌ ಠಾಣಾ ವ್ಯಾಪ್ತಿಯ ವಿಭೂತಿಪುರದಲ್ಲಿ ನಡೆದಿದೆ.

ರಾಘವೇಂದ್ರ ಎಂಬಾತ ತನ್ನ ಪತ್ನಿ ಶೃತಿ ಅವರನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ರಾಘವೇಂದ್ರ ಹಾಗೂ ಶೃತಿ ಪ್ರೀತಿಸಿ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳನ್ನು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಇರಿಸಲಾಗಿತ್ತು. ಹೀಗಾಗಿ ದಂಪತಿ ಇಬ್ಬರೇ ಮನೆಯಲ್ಲಿ ಇದ್ದ ವೇಳೆ ನಿನ್ನೆ ಗಲಾಟೆ ನಡೆದಿದೆ.

ಗಲಾಟೆ ವಿಕೋಪಕ್ಕೆ ತಿರುಗಿದ ಸಂದರ್ಭದಲ್ಲಿ ರಾಘವೇಂದ್ರ ಬಿಯರ್ ಬಾಟಲಿಯಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನೆ ಕುರಿತು ಹೆಚ್‌ಎಎಲ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.