ಉಡುಪಿ: ಕಾಪುವಿನಿಂದ ಉಡುಪಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್ ಟೆಂಪೋ ವಾಹನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳನ್ನು ಕರೆದೊಯ್ಯುತ್ತಿರುವ ದೃಶ್ಯ ಕಟಪಾಡಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ಬದಲು ಗೂಡ್ಸ್ ಟೆಂಪೋದಲ್ಲಿ ಪ್ರಯಾಣ ಮಾಡಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸಂಭ್ರಮದ ಹೆಸರಿನಲ್ಲಿ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಮುಂದಿನ ದಿನಗಳಲ್ಲಿ ಚೌತಿ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಇಂತಹ ಅಪಾಯಕಾರಿ ಪ್ರಯಾಣಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಈಗಲೇ ಕ್ರಮ ಕೈಗೊಳ್ಳಬೇಕು.
ಮಕ್ಕಳನ್ನು ಗೂಡ್ಸ್ ವಾಹನದಲ್ಲಿ ಕರೆದೊಯ್ದ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.















