ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ
ಉಡುಪಿ: ಶ್ರೀಕೃಷ್ಣ ಮಠಕ್ಕೆ,ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ,ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.