ಬೆಂಗಳೂರು ವಿಶ್ವವಿದ್ಯಾಲಯದಲ್ಲಿದೆ ಸಂಯೋಜಕರ ಹುದ್ದೆ: ಶಿಕ್ಷಣ ಕ್ಷೇತ್ರದಲ್ಲಿ ದುಡಿಯುವ ಕನಸಿದ್ದರೆ ಮಿಸ್ ಮಾಡದೇ ಟ್ರೈ ಮಾಡಿ!

ಬೆಂಗಳೂರು: ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಡಾ. ಮನಮೋಹನ್ ಸಿಂಗ್ ಬಿಸಿಯು ಸಂಸ್ಥೆಯಲ್ಲಿ ಉದ್ಯೋಗಾವಕಾಶ ಲಭ್ಯವಿದೆ. ಸಂಯೋಜಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಒಟ್ಟು 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000 ರೂ.ವರೆಗೆ ಸಂಭಾವನೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ.

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 10ರಂದು ಆರಂಭವಾಗಿದ್ದು, ಸೆಪ್ಟೆಂಬರ್ 15, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಬೋರ್ಡ್ ರೂಮ್, ಜ್ಞಾನಜ್ಯೋತಿ ಹಾಲ್, ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜು ಕ್ಯಾಂಪಸ್, ಬೆಂಗಳೂರು ವಿಳಾಸಕ್ಕೆ ಸಲ್ಲಿಸಬೇಕು.

ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು.