ಉಡುಪಿ: ಶ್ರೀಮತಿ ಶಿಲ್ಪ ಹಾಗೂ ಶ್ರೀಕಾಂತ್ ಆಚಾರ್ಯ ಗುಡ್ಡೆಯಂಗಡಿ ದಂಪತಿಯ ಪುತ್ರ ಸಮರ್ಥ್ ಎಸ್. ಆಚಾರ್ಯ ಅವರು ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ವತಿಯಿಂದ ನಡೆದ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು, ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಮರ್ಥ್ ಅವರ ಈ ಸಾಧನೆಗೆ ಕುಟುಂಬಸ್ಥರು, ಶಿಕ್ಷಕರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.
















