ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಕುಂದಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಆಶ್ರಯದಲ್ಲಿ  ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಕುಂದಾಪುರ ಹಾಗೂ ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ  ಥ್ರೋಬಾಲ್ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಪ್ರಥಮ ಸ್ಥಾನದೊಂದಿಗೆ ವಿಜಯದ ಕಿರೀಟವನ್ನು ಧರಿಸಿ ಜಿಲ್ಲಾ ಮಟ್ಟದ  ಪಂದ್ಯಾಟಕ್ಕೆ ಅರ್ಹತೆ ಪಡೆದಿದ್ದಾರೆ. 

ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ತರಬೇತಿಯನ್ನು ನೀಡಿದ್ದಾರೆ. ಕ್ರೀಡಾಪಟುಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಶ್ಲಾಘಿಸಿ, ಮುಂದಿನ ಪಂದ್ಯಗಳಿಗೆ ಶುಭ ಹಾರೈಸಿದ್ದಾರೆ.