ಉಡುಪಿ: ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ಹೆಲಿಪ್ಯಾಡ್ಗೆ ಆಗಮಿಸುವ ಅವರು ನಂತರ ಹೆಬ್ರಿಯಲ್ಲಿ ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಆ ಬಳಿಕ ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.















