ಉಡುಪಿ: ನಗರದ ಓಮ್ನಿಯಾನ್ ಪ್ರೀಮಿಡಿಯಾ ಪ್ರೈವೇಟ್ ಲಿಮಿಟೆಡ್, ರೀಗಲ್ ಎಂಟ್ರಿ, 3 ನೇ ಮಹಡಿ, ಕರಾವಳಿ ಬೈಪಾಸ್ ಬಳಿ, ಅಂಬಲಪಾಡಿ ಉಡುಪಿ ಇಲ್ಲಿ ಸೆಪ್ಟಂಬರ್ 21 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
3ಡಿ / ಪೋಟೋಶಾಪ್ ಮತ್ತು ಅಕೌಂಟಿಂಗ್ ಹುದ್ದೆಗಳಿಗೆ ಪಿ.ಯು.ಸಿ, ಎಂ.ಕಾಮ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.















