ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿರುವ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವ-ಉದ್ಯೋಗ ಕಾರ್ಯಕ್ರಮಗಳು ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ: 9482300400 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ಕೊಠಡಿ ಸಂಖ್ಯೆ: 307, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.