ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆನಂದ ತೀರ್ಥ ಪದವಿ ಪೂರ್ವ ಕಾಲೇಜು, ಪಾಜಕ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಥ್ರೋ ಬಾಲ್ ಕಣದಲ್ಲಿ ಛಾಪು ಮೂಡಿಸಿ ರನ್ನರ್ ಅಪ್ ಗೌರವಕ್ಕೆ ಪಾತ್ರವಾಗಿದೆ.
ವಿದ್ಯಾರ್ಥಿಗಳಾದ ಪ್ರೀತಿ, ಸಾಕ್ಷಿ, ಶಿವಮಣಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ತರಬೇತಿ ನೀಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಸಾಧನೆಯನ್ನು ಪ್ರಶಂಸಿಸಿದ್ದಾರೆ.















