ಉಡುಪಿ: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಉಡುಪಿ ನಗರದಲ್ಲಿ ಬುಧವಾರ ಅದ್ಧೂರಿ ಮೆರವಣಿಗೆ ನಡೆಯಿತು. ನಗರದ ಪ್ರಮುಖ ಬೀದಿಗಳ ಮೂಲಕ ಅಜ್ಜರಕಾಡು ಪುರಭವನದವರೆಗೆ ನಡೆದ ಮೆರವಣಿಗೆಯಲ್ಲಿ ಪೌರ ಕಾರ್ಮಿಕರು ಹಾಗೂ ನಗರಸಭೆಯ ಅಧಿಕಾರಿಗಳು ಪಾಲ್ಗೊಂಡರು.
ಡಿಜೆ ಹಾಡು ಹಾಗೂ ಸಾಂಪ್ರದಾಯಿಕ ಡೋಲು ವಾದ್ಯದ ಸದ್ದಿಗೆ ಪೌರ ಕಾರ್ಮಿಕರು ಹೆಜ್ಜೆ ಹಾಕಿ, ಹಾಡು–ಕುಣಿತದೊಂದಿಗೆ ಸಂಭ್ರಮಿಸಿದರು. ಪೌರ ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಹಬ್ಬದ ವಾತಾವರಣ ಕಂಡುಬಂತು.















