ರಾಜ್ಯದಲ್ಲಿ ಹಾಲಿನ ದರ ರೂ.4 ಹೆಚ್ಚಳ ಬಹುತೇಕ ಫಿಕ್ಸ್

ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಹೊರೆ ಬೀಳುವ ಸಾಧ್ಯತೆ ಎದುರಾಗಿದೆ. ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಸಲ್ಲಿಸಿರುವ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಹಾಲು ಒಕ್ಕೂಟಗಳ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ನಂದಿನಿ ಹಾಲಿನ ಖರೀದಿ ಹಾಗೂ ಮಾರಾಟ ದರವನ್ನು ಪ್ರತಿ ಲೀಟರ್‌ಗೆ ₹8ರಿಂದ ₹10ರವರೆಗೆ ಹೆಚ್ಚಿಸುವಂತೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ 16 ಜಿಲ್ಲೆಗಳ ಹಾಲು ಸಹಕಾರ ಸಂಘಗಳ ಬೇಡಿಕೆಯನ್ನು ಸರ್ಕಾರ ಪರಿಗಣಿಸಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ ₹4ರಿಂದ ₹5ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವ ನಿರೀಕ್ಷೆಯಿದೆ.

ಹಾಲಿನ ದರ ಏರಿಕೆಗೆ ಕಾರಣವೇನು?

ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ಜಾನುವಾರುಗಳಿಗೆ ಅಗತ್ಯವಿರುವ ಹಸಿರು ಮೇವು ಮತ್ತು ಒಣ ಮೇವಿನ ಲಭ್ಯತೆಯಲ್ಲಿ ಕೊರತೆ ಉಂಟಾಗಿದೆ. ಜತೆಗೆ ಪಶು ಆಹಾರ ತಯಾರಿಕೆಗೆ ಬಳಸುವ ಕಚ್ಚಾ ಸಾಮಗ್ರಿಗಳು, ಮೆಕ್ಕೆಜೋಳ, ಇಂಡಿ–ಬೂಸಾ ಸೇರಿದಂತೆ ವಿವಿಧ ವಸ್ತುಗಳ ದರದಲ್ಲಿ ಏರಿಕೆಯಾಗಿದೆ.

ರಾಸುಗಳಿಗೆ ಬಳಸುವ ನೆಲಹಾಸು, ಸಾಗಣೆ ವೆಚ್ಚ ಸೇರಿದಂತೆ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವೂ ಹೈನುಗಾರಿಕೆ ವೆಚ್ಚವನ್ನು ಹೆಚ್ಚಿಸಿದೆ. ಹೀಗಾಗಿ ರೈತರಿಗೆ ಹಾಲಿನ ಉತ್ಪಾದನಾ ವೆಚ್ಚ ಹೆಚ್ಚಾಗಿದ್ದು, ಅದರ ಹಿನ್ನೆಲೆಯಲ್ಲಿ ಖರೀದಿ ದರ ಜಾಸ್ತಿ ಮಾಡುವ ಕುರಿತು ಯೋಚಿಸಿದೆ