ಉಡುಪಿ: ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಸೆಪ್ಟಂಬರ್ 25 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸೆ. 24 ರಂದು ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಸೆ. 25 ರಂದು ಬೆಳಗ್ಗೆ 10 ಗಂಟೆಗೆ ಉಚ್ಚಿಲ ಮೊಗವೀರ ಭವನದಲ್ಲಿ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಹಾಗೂ ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿನಿಲಯ ಕಟ್ಟಡ ಉದ್ಘಾಟನೆ ಮತ್ತು ಗುರಿಕಾರರಿಗೆ ಗೌರವಧನ ವಿತರಣೆ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.















