ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ಅ.1ರಿಂದ ಜಾರಿಗೆ ಬರುವಂತೆ 19 ಕೆ.ಜಿ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ₹62.50ರಷ್ಟು ಹೆಚ್ಚಿಸಲಾಗಿದೆ.
ಹಬ್ಬದ ಸೀಸನ್ಗೂ ಮುನ್ನವೇ ವಾಣಿಜ್ಯ ಸಿಲಿಂಡರ್ ದರ ಏರಿಕೆಯಾಗಿರುವುದರಿಂದ ಹೋಟೆಲ್, ರೆಸ್ಟೋರೆಂಟ್, ಡಾಬಾ ಸೇರಿದಂತೆ ವಾಣಿಜ್ಯ ಬಳಕೆದಾರರಿಗೆ ಹೆಚ್ಚುವರಿ ವೆಚ್ಚದ ಹೊರೆ ಬೀಳಲಿದೆ.
ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ₹62.50ರಷ್ಟು ಏರಿಕೆಯಾಗಿದ್ದು, ₹2,747.50ರಿಂದ ₹2,810ಕ್ಕೆ ತಲುಪಿದೆ. ಪರಿಷ್ಕೃತ ದರ ಅ.1ರಿಂದಲೇ ಜಾರಿಗೆ ಬಂದಿದೆ.
ಇದೇ ವೇಳೆ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.















