ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸತ್ಯ ,ತ್ಯಾಗ , ಅಹಿಂಸೆ ಸರಳತೆಗೆ ಹೆಸರಾದಂತಹ ಮಾಹನ್ ಚೇತನರ ನೆನಪಿಸಿಕೊಳ್ಳಲಾಯಿತು,
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆ, ಉಪ ಪ್ರಾಂಶುಪಾಲರಾದ ಜೋಯಲ್ ಮನೋಜ್ ಫರ್ನಾಂಡೀಸ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.















