ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1. 2 (ಎ), 3 (ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ
ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ
(ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, 2026 ಅಕ್ಟೋಬರ್ 30 ಕ್ಕೆ ಅನ್ವಯವಾಗುವಂತೆ 2006 ರ ಅಕ್ಟೋಬರ್ 30 ರಿಂದ 2009 ರ ಅಕ್ಟೋಬರ್ 30 ನಡುವಿನ ಅವಧಿಯಲ್ಲಿ ಜನಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯು ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆ,
ಹನೆಹಳ್ಳಿ, ಬಾರ್ಕೂರು ಇಲ್ಲಿ ನಡೆಯಲಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್
https://udupi.nic.in ಅಥವಾ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881 ಅನ್ನು ಕಚೇರಿ ವೇಲೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.















