ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ದ್ವಿಚಕ್ರ ವಾಹನ ಸವಾರರು ಹಾಫ್ ಹೆಲ್ಮೆಟ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಸವಾರರು ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್ ಬದಲಿಗೆ ಬಿಐಎಸ್ ಅಥವಾ ಐಎಸ್ಐ ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್ಗಳನ್ನು ಮಾತ್ರ ಬಳಸಬೇಕು ಎಂದು ಇಲಾಖೆ ಸೂಚಿಸಿದೆ. ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಅಲ್ಲದೆ, ಹಾಫ್ ಹೆಲ್ಮೆಟ್ ತಯಾರಿಸುವ ಹಾಗೂ ಮಾರಾಟ ಮಾಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.















