ಉಡುಪಿಯಲ್ಲಿ ವಿಕಸಿತ ಭಾರತ ಸಂಕಲ್ಪ ಸಭೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಸಾಂವಿಧಾನಿಕ ಹುದ್ದೆಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಬುಧವಾರ ನಗರದ ಪುರಭವನದಲ್ಲಿ ‘ವಿಕಸಿತ ಭಾರತ ಸಂಕಲ್ಪ ಸಭೆ’ ಹಾಗೂ ‘ಸೇವಾ ಜ್ಯೋತಿ ಯಾತ್ರೆ’ ಕಾರ್ಯಕ್ರಮ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ಜ್ಯೋತಿ ಬೆಳಗಿಸಿದ ಕಾರ್ಯಕ್ರಮದ ನೇರ ಪ್ರಸಾರವನ್ನು ಜಿಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವೀಕ್ಷಿಸಿದರು. ಬಳಿಕ ಪಕ್ಷದ ಪ್ರಮುಖರು ಸೇವಾ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ. ಸುನಿಲ್ ಕುಮಾರ್, ಯಶ್ಪಾಲ್ ಸುವರ್ಣ, ಗುರುರಾಜ ಗಂಟಿಹೊಳೆ, ಗುರ್ಮೆ ಸುರೇಶ ಶೆಟ್ಟಿ, ಕಿರಣ್ ಕೊಡ್ಗಿ ಸೇರಿದಂತೆ ಜಿಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.