ಗೋವಾ: ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಗೋವಾದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಕ್ಟೋಬರ್ 4ರಂದು ಗೋವಾದ ದೊನಾ ಪೌಲಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು, ಅದೇ ತಮ್ಮ ಕೊನೆಯ ಸಾರ್ವಜನಿಕ ಕಾರ್ಯಕ್ರಮವಾಗಿತ್ತು.
ಸುದ್ದಿ ಸಂಸ್ಥೆ ಪಿಟಿಐ ಹಂಚಿಕೊಂಡಿರುವ ವಿಡಿಯೊದಲ್ಲಿ, ಗೋವಾದ ಸಾಮ್ರಾಟ್ ಕ್ಲಬ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾನಾ ಪಾಟೇಕರ್ ಮಾತನಾಡುತ್ತಿರುವ ದೃಶ್ಯಗಳಿವೆ. ಬಿಳಿ ಕುರ್ತಾ ಹಾಗೂ ಬಿಳಿ ಶಾಲು ಧರಿಸಿದ್ದ ಅವರು, ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರನ್ನು ಸ್ಮರಿಸಿ, ಅವರ ಕಾರ್ಯಶೈಲಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದರು.
ಕಾರ್ಯಕ್ರಮದಲ್ಲಿ ಮರಾಠಿಯಲ್ಲಿ ಮಾತನಾಡಿದ ನಾನಾ ಪಾಟೇಕರ್, “ನಾವೆಲ್ಲರೂ ಒಂದಲ್ಲ ಒಂದು ದಿನ ಈ ಲೋಕವನ್ನು ಬಿಟ್ಟು ಹೋಗಲೇಬೇಕು. ನಾಳೆ ನಾನು ಇರುತ್ತೇನೋ ಇಲ್ಲವೋ ನನಗೆ ಗೊತ್ತಿಲ್ಲ. ಪ್ರತಿಯೊಬ್ಬರ ಜೀವನವೂ ಒಂದು ಹಂತದಲ್ಲಿ ಅಂತ್ಯಗೊಳ್ಳುತ್ತದೆ. ಆದರೆ ಅದಕ್ಕೂ ಮುನ್ನ, ನಾವು ಮಾಡಲು ಬಯಸಿದ್ದನ್ನು ಮಾಡಲು ಸಾಧ್ಯವಾಗುತ್ತಿದೆಯೇ ಎಂಬುದನ್ನು ನಮ್ಮನ್ನು ನಾವೇ ಪ್ರಶ್ನಿಸಿಕೊಳ್ಳಬೇಕು” ಎಂದು ಹೇಳಿದ್ದರು.
ಅವರ ಈ ಮಾತುಗಳು ಇದೀಗ ಅವರು ನಿಧನರಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿದ್ದು, ಅಭಿಮಾನಿಗಳಲ್ಲಿ ಭಾವುಕತೆ ಮೂಡಿಸಿದೆ.
45 ನಿಮಿಷ ಸಿಪಿಆರ್ ನೀಡಿದರೂ ಉಳಿಸಲಾಗಲಿಲ್ಲ
ನಾನಾ ಪಾಟೇಕರ್ ಅವರನ್ನು ಉಳಿಸಲು ವೈದ್ಯರು ಸತತ 45 ನಿಮಿಷಗಳ ಕಾಲ ಸಿಪಿಆರ್ ನೀಡಿದರೂ ಫಲಕಾರಿಯಾಗಲಿಲ್ಲ ಎಂದು ಮಣಿಪಾಲ್ ಆಸ್ಪತ್ರೆಯ ಆಂಕೋಲಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಲ್ಕರ್ ತಿಳಿಸಿದ್ದಾರೆ. ಈ ಸಂಬಂಧ ವೈದ್ಯಕೀಯ-ಕಾನೂನು ಪ್ರಕರಣ (MLC) ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ನಾನಾ ಪಾಟೇಕರ್ ಅವರು ಕೊನೆಯದಾಗಿ ಶಾಹಿದ್ ಕಪೂರ್, ತೃಪ್ತಿ ದಿಮ್ರಿ, ಅವಿನಾಶ್ ತಿವಾರಿ ಹಾಗೂ ದಿಶಾ ಪಟಾನಿ ಅಭಿನಯದ ‘ಒ’ರೋಮಿಯೋ (O’Romeo) ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.















