ಮಣಿಪಾಲ MSDC ವತಿಯಿಂದ  ಶಾಲಾ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 13ರಿಂದ ‘ದಸರಾ ಸ್ಕಿಲ್ ಕ್ಯಾಂಪ್’

ಮಣಿಪಾಲ: ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC) ವತಿಯಿಂದ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ‘ದಸರಾ ಸ್ಕಿಲ್ ಕ್ಯಾಂಪ್’ ಆಯೋಜಿಸಲಾಗಿದೆ.

ಅಕ್ಟೋಬರ್ 13ರಿಂದ 15ರವರೆಗೆ ನಡೆಯಲಿರುವ ಈ ಕೌಶಲ್ಯ ಶಿಬಿರದಲ್ಲಿ ಮೆಹಂದಿ ಆರ್ಟ್, ರೋಬೋಟಿಕ್ಸ್ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ (IoT), ಶಾಲಾ ಶಿಕ್ಷಣಕ್ಕಾಗಿ AI ಟೂಲ್ಸ್ ಹಾಗೂ ರೆಸಿನ್ ಆರ್ಟ್ ಕುರಿತು ತರಬೇತಿ ನೀಡಲಾಗುತ್ತದೆ.

ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ತಾಂತ್ರಿಕ ಜ್ಞಾನ ಹಾಗೂ ಪ್ರಾಯೋಗಿಕ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ತರಬೇತಿ ನಡೆಯಲಿದೆ.

ಶಿಬಿರದ ಶುಲ್ಕ ಪ್ರತಿ ವಿದ್ಯಾರ್ಥಿಗೆ ₹1,000 ನಿಗದಿಪಡಿಸಲಾಗಿದೆ. ರೆಸಿನ್ ಆರ್ಟ್ ತರಬೇತಿಗೆ ಮಾತ್ರ ಹೆಚ್ಚುವರಿಯಾಗಿ ₹2,000 ಶುಲ್ಕವಿದ್ದು, ಇದರಲ್ಲಿ ₹1,000 ಮೌಲ್ಯದ ಸಾಮಗ್ರಿಗಳು ಸೇರಿವೆ.

ಸೀಟುಗಳು ಸೀಮಿತವಾಗಿರುವ ಹಿನ್ನೆಲೆಯಲ್ಲಿ ಆಸಕ್ತ ವಿದ್ಯಾರ್ಥಿಗಳು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳುವಂತೆ ಆಯೋಜಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 8123165069 ಸಂಖ್ಯೆಯನ್ನು ಸಂಪರ್ಕಿಸಬಹುದು.