ಉಡುಪಿ: ಮಾನಸಿಕ ಅಸ್ವಸ್ಥ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ಜನತಾಕಾಲನಿ ನಿವಾಸಿಯಾದ ಆರ್. ರಾಜು (68) ಎಂಬ ವ್ಯಕ್ತಿಯು ಮಾನಸಿಕ ಅಸ್ವಸ್ಥರಾಗಿದ್ದು, ಪತ್ನಿಯ ಮರಣ ನಂತರ ಸರಿಯಾಗಿ ಮನೆಗೆ ಬಾರದೆ ಸಂಬoಧಿಕರ ಮನೆಯಲ್ಲಿ ಉಳಿದುಕೊಂಡು 2-3 ತಿಂಗಳಿಗೊಮ್ಮೆ ಮನೆಗೆ ಬಂದು ಹೋಗುತ್ತಿದ್ದು, ಸುಮಾರು ಒಂದೂವರೆ ವರ್ಷಗಳಿಂದ ಮನೆಗೂ ಬಾರದೇ ಸಂಬಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸಾಧಾರಣ ಮೈಕಟ್ಟು, ಉದ್ದಮುಖ ಹೊಂದಿರುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಎಸ್.ಐ ಮೊ.ನಂ:9480805475, ಪಿ.ಐ ಮೊ.ನಂ: 9480805448 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.