ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕರ್ನಾಟಕದಾದ್ಯಂತ ಹಿಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲೂ ಮಳೆ ಮುಂದುವರಿಯುವ ನಿರೀಕ್ಷೆಯಿದೆ.