ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ಪೋಷಕರ ಸಭೆ

ಉಡುಪಿ- ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 17/10/26 ರಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ.ಗಣನಾಥ್ ಶೆಟ್ಟಿಯವರು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಕಲಿಕೆಯಲ್ಲಿ ಎದುರಾಗುವ ಸವಾಲುಗಳು, ಪರೀಕ್ಷಾ ಸಿದ್ಧತೆ ಮತ್ತು ವಿದ್ಯಾರ್ಥಿಗಳ ಪ್ರಗತಿಯ ಕುರಿತು ಪೋಷಕರಿಗೆ ವಿವರಿಸಿದರು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಕಾಲೇಜು ಮತ್ತು ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆಯವರು ಸಭೆಯ ಉದ್ದೇಶದ ಕುರಿತು ಪ್ರಾಸ್ತಾವಿಕ ಮಾತುಗಳಾಡಿದರು. ಉಪ ಪ್ರಾಂಶುಪಾಲರಾದ ಜೋಯಲ್ ಮನೋಜ್ ಫರ್ನಾಂಡೀಸ್ ಅವರು ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಪೋಷಕರು ಹಾಗು ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು. ಕನ್ನಡ ಉಪನ್ಯಾಸಕ ಆದರ್ಶ ಎಸ್. ಎನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.