ಉಡುಪಿ: ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ ಯುವ ಘಟಕದ ನೇತೃತ್ವದಲ್ಲಿ ಆಯೋಜಿಸಿದ್ದ 9ನೇ ವರ್ಷದ ಉಡುಪಿ ದಾಂಡಿಯಾ–2026 ಕಾರ್ಯಕ್ರಮವು ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಅ.17ರಂದು ಅದ್ಧೂರಿಯಾಗಿ ನಡೆಯಿತು.
ನವರಾತ್ರಿ ಸಂಭ್ರಮದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಮಂದಿ ಬಣ್ಣಬಣ್ಣದ ಸಾಂಪ್ರದಾಯಿಕ ಉಡುಪು ಧರಿಸಿ, ಸಂಗೀತದ ಲಯಕ್ಕೆ ತಕ್ಕಂತೆ ದಾಂಡಿಯಾ ನೃತ್ಯದಲ್ಲಿ ಪಾಲ್ಗೊಂಡರು. ಮಕ್ಕಳು, ಯುವಜನರು ಹಾಗೂ ಹಿರಿಯರು ಉತ್ಸಾಹದಿಂದ ಹೆಜ್ಜೆ ಹಾಕಿ ಸಂಭ್ರಮಿಸಿದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ಕೆ. ರಘುಪತಿ ಭಟ್, ಉದ್ಯಮಿ ಕೆ. ಉದಯಕುಮಾರ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.















