ಮಂದಾರ್ತಿ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ ನವರಾತ್ರಿ ವಿಶೇಷ ಪೂಜಾ ಮಹೋತ್ಸವ ಆರಂಭಗೊಂಡಿದ್ದು, ಅ.21 ರವರೆಗೆ ಸಂಭ್ರಮದಿಂದ ನಡೆಯಲಿದೆ.
ಅಕ್ಟೋಬರ್ 16ರಂದು ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಮೂಲ ದೇವಳದ ವತಿಯಿಂದ ಚಂಡಿಕಾಯಾಗವು ಸಂಪನ್ನಗೊಂಡಿತು.
ನವರಾತ್ರಿ ಉತ್ಸವದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಶ್ರೀ ಅಮ್ಮನವರ ಪೂರ್ಣಾನುಗ್ರಹಕ್ಕೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಉತ್ಸವದ ಆಯೋಜಕರು ವಿನಂತಿಸಿದ್ದಾರೆ.















