ಉಡುಪಿ: ಮಾರ್ಪಳ್ಳಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನವರಾತ್ರಿಯ ಅಂಗವಾಗಿ ಚಂಡಿಕಾ ಹೋಮ ಶ್ರದ್ಧಾಭಕ್ತಿಯಿಂದ ನಡೆಯಿತು.
ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಹೋಮದಲ್ಲಿ ಯಾಗ ಹಾಗೂ ಪೂರ್ಣಾಹುತಿ ನೆರವೇರಿಸಲಾಯಿತು.
ಸಂಜೆ ದೇವರಿಗೆ ವಿಶೇಷ ರಂಗಪೂಜೆ ಜರುಗಿತು. ಭಕ್ತರು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.















