ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಯುವ ಸಂಸತ್ತು-2026ರ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಕುಂದಾಪುರ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಧಾನಸಭೆ ಮಾದರಿಯ ಯುವ ಸಂಸತ್ತು-2026 ಕಾರ್ಯಕ್ರಮದಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚರ್ಚಾ ಸ್ಪರ್ಧೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿಗಳು:

* ಮಯಸ್ಕರ್ ಭಟ್ – ದ್ವಿತೀಯ ವಾಣಿಜ್ಯ ವಿಭಾಗ

* ವರಪ್ರಸಾದ್ – ದ್ವಿತೀಯ ವಿಜ್ಞಾನ ವಿಭಾಗ

* ಮನ್ವಿತಾ – ದ್ವಿತೀಯ ವಿಜ್ಞಾನ ವಿಭಾಗ

ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಶ್ರೀ ವೆಂಕಟರಮಣ ಪಿಯು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಶುಭಕೋರಿದ್ದಾರೆ.