ಕುಸ್ತಿ ಪಂದ್ಯಾಟದಲ್ಲಿ ಮೂಡಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ಹಳಿಯಾಳದ ವಿಶ್ವನಾಥ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕುಂದಾಪುರದ ಮೂಡಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪದಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.

ಮಹಾವಿದ್ಯಾಲಯದ ವಿದ್ಯಾರ್ಥಿ ಪ್ರಣೀತ್ ರೈ ಕಂಚಿನ ಪದಕ ಹಾಗೂ ವಿದ್ಯಾರ್ಥಿನಿ ಹರ್ಷಿಣಿ ಬೆಳ್ಳಿಯ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಮಹಾವಿದ್ಯಾಲಯದ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.