ಅ. 29 ರಂದು ಉಡುಪಿ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್ ಇವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 29 ಗುರುವಾರದಂದು ಬೆಳಿಗ್ಗೆ 7.30ರಿಂದ ಮಧ್ಯಾಹ್ನ 2.30ರ ವರೆಗೆ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಸುಮಾರು 200 ಮಂದಿ ದಿವ್ಯಾಂಗರಿಗೆ ಪೌಷ್ಟಿಕ ಆಹಾರ ಕಿಟ್ ನೀಡಲಾಗುವುದು.
ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಡಾ.ಆರತಿಕೃಷ್ಣ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಐವನ್ ಡಿಸೋಜಾ, ಕೆಪಿಸಿಸಿಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾಜಿ ಶಾಸಕ ಗೋಪಾಲ ಪೂಜಾರಿ,ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಪೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲು, ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ.
ಅರ್ಥಿಕ ಅಶಕ್ತ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಳೆದ ಸತತ ನಾಲ್ಕು ವರ್ಷಗಳಿಂದ ರಕ್ತದಾನ ಶಿಬಿರವನ್ನು
ಹಮ್ಮಿಕೊಂಡಿದ್ದು ಒಟ್ಟು 800 ಯುನಿಟ್ ರಕ್ತವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ನೀಡಿರುತ್ತದೆ. ಈ ಬಾರಿ ಸುಮಾರು 300 ಯುನಿಟ್ ರಕ್ತದ ಗುರಿಯನ್ನು ಹೊಂದಿದ್ದು
ಸಹೃದಯ ರಕ್ತದಾನಿಗಳು ಈ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಆರ್ಥಿಕ ಅಶಕ್ತ ರೋಗಿಗಳಿಗೆ
ನೆರವಾಗಬೇಕೆಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ವಿನಂತಿಸಿ ಕೊಂಡಿದ್ದಾರೆ.
ರಕ್ತದಾನಿಗಳು 9449894375 (ಸತೀಶ್ ಪುತ್ರನ್), 9880058581 (ಸುಕೇಶ್ ಕುಂದರ್) 8150824123 (ಸತೀಶ್ ಕೊಡವೂರು) ಇವರುಗಳನ್ನು ಸಂಪರ್ಕಿಸಲು ಕೋರಲಾಗಿದೆ.