ಅಲೆಮಾರಿ ಸಮುದಾಯದವರಿಂದ ವಿವಿಧ ಯೋಜನೆಗಳಿಗಾಗಿ ಅರ್ಜಿ ಆಹ್ವಾನ

ಉಡುಪಿ: ಪ.ಜಾತಿ/ ಪ.ಪಂಗಡ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ, ಅತೀ ಸೂಕ್ಷ್ಮ ಸಮುದಾಯದವರಿಗಾಗಿ ಅನುಷ್ಠಾನ ಮಾಡಲಾಗಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ ವಿಳಾಸ https://sevasindhu.karnataka.gov.in/ ಮೂಲಕ ಗ್ರಾಮಒನ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ.

ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳು ಸಂಬAಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದೊಳಗೆ ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ದೂ.ಸಂ:0820-2574892 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.