ಕುಂದಾಪುರ: ಬಳ್ಳೂರಿನಲ್ಲಿ ಅಕ್ಟೋಬರ್ 30ರಂದು ನಡೆದ ಟಿಪ್ಪರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಟಿ.ಕೆ. (ಕಂಡೂರು) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ (ನ. 2) ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.















