ಪೇಜಾವರ ಶ್ರೀಗಳು ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ: ಡಾ.ಸತ್ಯನಾರಾಯಣ

ಉಡುಪಿ: ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾದ ದಿನಕ್ಕೆ ಹೋಲಿಸಿದರೆ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶ ವಿಭಾಗದ ತಜ್ಞ ವೈದ್ಯ ಸತ್ಯನಾರಾಯಣ ತಿಳಿಸಿದರು.

ಮಂಗಳವಾರ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೇಜಾವರ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಸುಧಾರಣೆಗೆ ಸಾಕಷ್ಟು ಸಮಯ ಬೇಕಾಗಬಹುದು. ವಯಸ್ಸಿನ ಕಾರಣದಿಂದ ಬಹಳ ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದರು.
ಶ್ರೀಗಳ ಚಿಕಿತ್ಸೆಗೆ ದೆಹಲಿಯ ಏಮ್ಸ್ ಹಾಗೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ತಜ್ಞ ವೈದ್ಯರ ಸಹಾಯ ಪಡೆಯಲಾಗುವುದು ಎಂದು ಹೇಳಿದರು.